ವಿಮೋಚನಕಾಂಡ 7:17 - ಕನ್ನಡ ಸತ್ಯವೇದವು C.L. Bible (BSI)17 ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದುದರಿಂದ ಯೆಹೋವನು ಹೇಳುವುದೇನೆಂದರೆ, ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವುದಕ್ಕಾಗಿ ನನ್ನ ಸೇವಕನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಸುವೆನು. ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದ್ದರಿಂದ ಆತನೇ ಯೆಹೋವನೆಂದು ನಿನಗೆ ತಿಳಿಯಲೆಂದು ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡೆಯುವೆನು; ಆ ನದಿಯ ನೀರು ರಕ್ತವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು. ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.