Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:2 - ಕನ್ನಡ ಸತ್ಯವೇದವು C.L. Bible (BSI)

2 ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಯೇಲರು ಈ ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂದು ನಿನ್ನ ಅಣ್ಣ ಆರೋನನೇ ಫರೋಹನ ಮುಂದೆ ಮಾತಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಅಣ್ಣನಾದ ಆರೋನನು ನಿನಗೋಸ್ಕರ ಪ್ರವಾದಿಯಾಗಿರುವನು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲ್ಯರು ದೇಶದಿಂದ ಹೊರಟುಹೋಗುವದಕ್ಕೆ ಅಪ್ಪಣೆಕೊಡಬೇಕೆಂಬದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಮಾತನಾಡಬೇಕು. ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:2
13 ತಿಳಿವುಗಳ ಹೋಲಿಕೆ  

ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು . ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು .


“ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.


ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.


ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು