Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:22 - ಕನ್ನಡ ಸತ್ಯವೇದವು C.L. Bible (BSI)

22 ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಐಗುಪ್ತದೇಶದ ಜೋಯಿಸರು ತಮ್ಮ ಗುಪ್ತವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವನು ಹೇಳಿದ್ದಂತೆಯೇ ಅವನು ಮೋಶೆ ಆರೋನರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನು ಮೋಶೆ ಆರೋನರ ಮಾತನ್ನು ಕೇಳಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:22
8 ತಿಳಿವುಗಳ ಹೋಲಿಕೆ  

ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.


ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.


ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.


ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು