Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:3 - ಕನ್ನಡ ಸತ್ಯವೇದವು C.L. Bible (BSI)

3 ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ನನ್ನ ಆಜ್ಞೆಗಳಿಗೆ ವಿಧೇಯನಾಗುವುದಿಲ್ಲ. ಆಗ ನಾನು ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡುವೆನು. ಆದರೂ ಅವನು ವಿಧೇಯನಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:3
25 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.


ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II


ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.


ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.


ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು