Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:4 - ಕನ್ನಡ ಸತ್ಯವೇದವು C.L. Bible (BSI)

4 ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ಈಜಿಪ್ಟನ್ನು ಭಯಂಕರವಾಗಿ ದಂಡಿಸಿ ನನ್ನ ಜನರನ್ನು ಆ ದೇಶದಿಂದ ಹೊರತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:4
28 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ.


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.


ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.


ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;


ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.


“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು