Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:5 - ಕನ್ನಡ ಸತ್ಯವೇದವು C.L. Bible (BSI)

5 ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಈಜಿಪ್ಟಿನ ವಿರುದ್ಧವಾಗಿ ನನ್ನ ಕೈಯನ್ನು ಚಾಚಿ ನನ್ನ ಜನರನ್ನು ಅವರ ದೇಶದಿಂದ ಬಿಡುಗಡೆ ಮಾಡಿದಾಗ, ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:5
20 ತಿಳಿವುಗಳ ಹೋಲಿಕೆ  

ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.


ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.


ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು