Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 7:7 - ಕನ್ನಡ ಸತ್ಯವೇದವು C.L. Bible (BSI)

7 ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಫರೋಹನ ಹತ್ತಿರ ಮಾತಾಡಿದ ಕಾಲದಲ್ಲಿ ಮೋಶೆ ಎಂಭತ್ತು ವರುಷದವನೂ ಆರೋನನು ಎಂಭತ್ತುಮೂರು ವರುಷದವನೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ಫರೋಹನೊಡನೆ ಮಾತಾಡಿದಾಗ ಮೋಶೆಗೆ ಎಂಭತ್ತು ವರ್ಷ ವಯಸ್ಸಾಗಿತ್ತು. ಆರೋನನಿಗೆ ಎಂಭತ್ತ ಮೂರು ವರ್ಷ ವಯಸ್ಸಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 7:7
11 ತಿಳಿವುಗಳ ಹೋಲಿಕೆ  

“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.


“ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.


ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.


ಮೋಶೆ ಮತ್ತು ಆರೋನರ ಸಂಗಡ ಸರ್ವೇಶ್ವರ ಮಾತಾಡಿ,


ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.


ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು