Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:15 - ಕನ್ನಡ ಸತ್ಯವೇದವು C.L. Bible (BSI)

15 ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:15
24 ತಿಳಿವುಗಳ ಹೋಲಿಕೆ  

ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.


“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”


ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.


ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”


ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.


ಆದರೂ ಫರೋಹನು ಮತ್ತೆ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಹೋಗಲು ಅಪ್ಪಣೆಕೊಡದೆ ಹೋದನು.


ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?


ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.


ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.


ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.


ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು