Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:16 - ಕನ್ನಡ ಸತ್ಯವೇದವು C.L. Bible (BSI)

16 ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತರುವಾಯ ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೋಲನ್ನು ಚಾಚಿ ಭೂವಿುಯ ಧೂಳನ್ನು ಹೊಡೆ; ಹೊಡೆಯಲು ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವದು ಎಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:16
7 ತಿಳಿವುಗಳ ಹೋಲಿಕೆ  

ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.


ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.


ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು.


ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’," ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು