Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:24 - ಕನ್ನಡ ಸತ್ಯವೇದವು C.L. Bible (BSI)

24 ಸರ್ವೇಶ್ವರ ಹಾಗೆಯೇ ಮಾಡಿದರು. ನೊಣಗಳು ಫರೋಹನ ಅರಮನೆಯಲ್ಲೂ ಅವನ ಪರಿವಾರದವರ ಮನೆಗಳಲ್ಲೂ ಸಮಸ್ತ ಈಜಿಪ್ಟ್ ದೇಶದಲ್ಲೂ ಬಹಳವಾಗಿ ತುಂಬಿಕೊಂಡವು. ಅವುಗಳಿಂದ ದೇಶ ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೋವನು ಹಾಗೆಯೇ ಮಾಡಿದನು. ಬಾಧಿಸುವ ನೊಣಗಳು ಫರೋಹನ ಅರಮನೆಯಲ್ಲಿಯೂ, ಅವನ ಪರಿವಾರದವರ ಮನೆಗಳಲ್ಲಿಯೂ, ಸಮಸ್ತ ಐಗುಪ್ತ ದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು. ಅವುಗಳಿಂದ ದೇಶವು ಹಾಳಾಗಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನು ಹಾಗೆಯೇ ಮಾಡಿದನು; ವಿಷದ ಹುಳಗಳು ಫರೋಹನ ಅರಮನೆಯಲ್ಲಿಯೂ ಅವನ ಪರಿವಾರದವರ ಮನೆಗಳಲ್ಲಿಯೂ ಸಮಸ್ತ ಐಗುಪ್ತದೇಶದಲ್ಲಿಯೂ ವಿಪರೀತವಾಗಿ ತುಂಬಿಕೊಂಡವು; ಅವುಗಳಿಂದ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೋವನು ತಾನು ಹೇಳಿದಂತೆಯೇ ಮಾಡಿದನು. ಲೆಕ್ಕವಿಲ್ಲದಷ್ಟು ಹುಳಗಳು ಈಜಿಪ್ಟಿಗೆ ಬಂದು ಫರೋಹನ ಮನೆಯಲ್ಲಿಯೂ ಅವನ ಅಧಿಕಾರಿಗಳ ಮನೆಗಳಲ್ಲಿಯೂ ತುಂಬಿಕೊಂಡವು. ಇಡೀ ಈಜಿಪ್ಟನ್ನೇ ಅವು ತುಂಬಿಕೊಂಡದ್ದರಿಂದ ದೇಶವು ಹಾಳಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೋವ ದೇವರು ಹಾಗೆಯೇ ಮಾಡಲಾರಂಭಿಸಿದರು. ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಈಜಿಪ್ಟ್ ದೇಶದಲ್ಲಿಯೂ ಬಂದವು. ನೊಣಗಳಿಂದ ದೇಶವು ಹಾಳಾಗಿ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:24
6 ತಿಳಿವುಗಳ ಹೋಲಿಕೆ  

ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II


ಕೊಡದೆ ಹೋದರೆ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಮಾರುಗಳಿಗೂ ನೊಣಗಳ ಕಾಟವನ್ನು ಉಂಟುಮಾಡುವೆನು. ಈಜಿಪ್ಟಿನವರು ವಾಸಿಸುವ ಮನೆಗಳಲ್ಲೂ ಅವರು ಕಾಲೂರುವ ನೆಲಗಳಲ್ಲೂ ಆ ನೊಣಗಳು ತುಂಬಿಕೊಳ್ಳುವುವು.


ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು."


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು