ವಿಮೋಚನಕಾಂಡ 8:28 - ಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಫರೋಹನು - ಒಳ್ಳೇದು, ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಮಾಡುವಂತೆ ನಿಮಗೆ ಅಪ್ಪಣೆ ಕೊಡುತ್ತೇನೆ; ಆದರೆ ದೂರ ಹೋಗಕೂಡದು; ನನಗೋಸ್ಕರ ಪ್ರಾರ್ಥನೆಮಾಡಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅದಕ್ಕೆ ಫರೋಹನು, “ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಅರ್ಪಿಸಲು ನಾನು ನಿಮಗೆ ಅಪ್ಪಣೆ ಕೊಡುವೆನು; ಆದರೆ ಬಹುದೂರ ಹೋಗಬೇಡಿ; ಈಗ ಹೋಗಿ ನನಗೋಸ್ಕರ ಪ್ರಾರ್ಥಿಸಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿ |