Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಮೇಲೆಯೂ, ನಿನ್ನ ಪ್ರಜೆಗಳ ಮೇಲೆಯೂ ಮತ್ತು ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ಪರಿವಾರದವರ ಮೇಲೆಯೂ ಕಪ್ಪೆಗಳು ಹರಡಿಕೊಳ್ಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಮೇಲೆಯೂ ನಿನ್ನ ಪ್ರಜೆಗಳ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ಇರುವವು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:4
13 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”


ಸರ್ವೇಶ್ವರ ಹಾಗೆಯೇ ಮಾಡಿದರು. ನೊಣಗಳು ಫರೋಹನ ಅರಮನೆಯಲ್ಲೂ ಅವನ ಪರಿವಾರದವರ ಮನೆಗಳಲ್ಲೂ ಸಮಸ್ತ ಈಜಿಪ್ಟ್ ದೇಶದಲ್ಲೂ ಬಹಳವಾಗಿ ತುಂಬಿಕೊಂಡವು. ಅವುಗಳಿಂದ ದೇಶ ಹಾಳಾಯಿತು.


ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು