Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 8:6 - ಕನ್ನಡ ಸತ್ಯವೇದವು C.L. Bible (BSI)

6 ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆರೋನನು ಐಗುಪ್ತ ದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ತನ್ನ ಕೈಚಾಚಲು ಕಪ್ಪೆಗಳು ಹೊರಟು ಬಂದು ದೇಶವನ್ನೆಲ್ಲಾ ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆರೋನನು ಐಗುಪ್ತದೇಶದಲ್ಲಿ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ಮುಚ್ಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 8:6
17 ತಿಳಿವುಗಳ ಹೋಲಿಕೆ  

ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II


ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II


ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.


ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು.


ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ.


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು