ವಿಮೋಚನಕಾಂಡ 9:14 - ಕನ್ನಡ ಸತ್ಯವೇದವು C.L. Bible (BSI)14 ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಸಾರಿ ನಾನು ನನ್ನ ವಶದಲ್ಲಿರುವ ಈತಿಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಅದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳುಕೊಳ್ಳುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು. ಅಧ್ಯಾಯವನ್ನು ನೋಡಿ |