Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:24 - ಕನ್ನಡ ಸತ್ಯವೇದವು C.L. Bible (BSI)

24 ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆನೆಕಲ್ಲಿನ ಮಳೆಯು ಬಹು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತಿತ್ತು. ಐಗುಪ್ತ್ಯದವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಝಗಝಗಿಸುವ ವಿುಂಚೂ ಅದರೊಂದಿಗಿತ್ತು. ಐಗುಪ್ತ್ಯರು ಜನಾಂಗವಾದಂದಿನಿಂದಲೂ ಆ ದೇಶದಲ್ಲಿ ಅಂಥ ಘೋರವಾದ ಕಲ್ಲಿನ ಮಳೆ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:24
11 ತಿಳಿವುಗಳ ಹೋಲಿಕೆ  

ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.


ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.


ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.


ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II


ಮಳೆಗೆ ಬದಲು ಕಳಿಸಿದ ಕಲ್ಮಳೆಯನು I ನಾಡಿನೆಲ್ಲೆಡೆಯೊಳು ಸಿಡಿಲುಮಿಂಚನು II


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು