Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:25 - ಕನ್ನಡ ಸತ್ಯವೇದವು C.L. Bible (BSI)

25 ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಲ್ಲಿನ ಮಳೆ ಐಗುಪ್ತದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರನ್ನೂ ಪಶುಗಳನ್ನೂ ಬೈಲಿನಲ್ಲಿದ್ದ ಎಲ್ಲವನ್ನೂ ನಷ್ಟಪಡಿಸಿತು. ಆ ಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಎಲ್ಲಾ ಪೈರುಗಳು ಹಾಳಾದವು. ಅಡವಿಯಲ್ಲಿದ್ದ ಮರಗಳು ಮುರಿದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ಆಲಿಕಲ್ಲಿನ ಮಳೆಯು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಹೊಲದಲ್ಲಿ ಇದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳು ಮಾಡಿ, ಎಲ್ಲಾ ಮರಗಳನ್ನು ಮುರಿದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:25
8 ತಿಳಿವುಗಳ ಹೋಲಿಕೆ  

ದ್ರಾಕ್ಷಾಲತೆಗಳನು ಹಾಳುಮಾಡಿದನು ಆಲಿಕಲ್ಲಿನಿಂದ I ಅವರ ಅತ್ತಿಮರಗಳನು ನಾಶಮಾಡಿದನು ಕಲ್ಮಳೆಯಿಂದ II


ಆದಕಾರಣ ಆಳುಗಳನ್ನು ಕಳಿಸಿ ನಿನ್ನ ಪಶುಪ್ರಾಣಿಗಳನ್ನೂ ನಿನ್ನ ಹೊಲಗದ್ದೆಯಲ್ಲಿ ಇರುವದೆಲ್ಲವನ್ನು ಭದ್ರಪಡಿಸು. ಮನೆಗೆ ಸೇರದೆ ಹೊರಗೆ ಇರುವ ಎಲ್ಲ ನರಮಾನವರೂ, ಪಶುಪ್ರಾಣಿಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು'.”


ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು