Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:28 - ಕನ್ನಡ ಸತ್ಯವೇದವು C.L. Bible (BSI)

28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸುವುದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೊರಡುವುದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈ ಭಯಂಕರವಾದ ಗುಡುಗೂ ಕಲ್ಲಿನ ಮಳೆಯೂ ಬಹು ಹೆಚ್ಚಾದವು. ಇವುಗಳನ್ನು ನಿಲ್ಲಿಸುವದಕ್ಕೆ ಯೆಹೋವನನ್ನು ಪ್ರಾರ್ಥಿಸಿರಿ. ದೇಶವನ್ನು ಬಿಟ್ಟು ಹೊರಡುವದಕ್ಕೆ ನಿಮಗೆ ಅಪ್ಪಣೆ ಕೊಡುತ್ತೇನೆ, ನಿಮ್ಮನ್ನು ತಡೆಯುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:28
14 ತಿಳಿವುಗಳ ಹೋಲಿಕೆ  

ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.


ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.


ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.


ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.


ಇದನ್ನು ಕೇಳಿದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಸಿ, “ನೀವು ಹೋಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಬಹುದು. ಆದರೆ ಯಾರ್ಯಾರು ಹೋಗಬೇಕೆನ್ನುತ್ತೀರಿ?” ಎಂದು ಕೇಳಿದನು.


ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.


ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.


ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.


ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”


ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು