ವಿಮೋಚನಕಾಂಡ 9:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ ಕುದುರೆ ಕತ್ತೆ ಒಂಟೆ ದನ ಕುರಿ ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯೆತ್ತಿ ಘೋರವ್ಯಾಧಿಯನ್ನುಂಟುಮಾಡುವನೆಂದು ತಿಳುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು. ಅಧ್ಯಾಯವನ್ನು ನೋಡಿ |