Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:31 - ಕನ್ನಡ ಸತ್ಯವೇದವು C.L. Bible (BSI)

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಜವೆಗೋದಿಗೆ ತೆನೆಯೂ ಅಗಸೆಗೆ ಮೊಗ್ಗೆಯೂ ಆಗಿದ್ದದರಿಂದ ಆ ಎರಡು ಬೆಳೆಗೂ ನಷ್ಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:31
6 ತಿಳಿವುಗಳ ಹೋಲಿಕೆ  

ಅದರಂತೆಯೆ ರೂತಳು ಜವೆಗೋದಿ ಮತ್ತು ಗೋದಿಯ ಸುಗ್ಗಿ ಮುಗಿಯುವವರೆಗೂ ಬೋವಜನ ಹೆಣ್ಣಾಳುಗಳ ಸಂಗಡ ತೆನೆಗಳನ್ನು ಆಯ್ದುಕೊಳ್ಳುತ್ತಾ ಇದ್ದಳು. ಅತ್ತೆಯ ಮನೆಯಲ್ಲೇ ವಾಸಿಸುತ್ತಿದ್ದಳು.


ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.


ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು