Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:6 - ಕನ್ನಡ ಸತ್ಯವೇದವು C.L. Bible (BSI)

6 ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮರುದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸತ್ತುಹೋದವು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮಾರಣೆಯ ದಿನ ಯೆಹೋವನು ಆ ಕಾರ್ಯವುಂಟಾಗುವಂತೆ ಮಾಡಿದನು. ಐಗುಪ್ತ್ಯರ ಪಶುಗಳೆಲ್ಲಾ ಸಾಯುತ್ತಾ ಬಂದವು; ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮರುದಿನ ಯೆಹೋವನು ಈ ಕಾರ್ಯವನ್ನು ಮಾಡಿದನು. ಈಜಿಪ್ಟಿನ ಹೊಲಗಳಲ್ಲಿದ್ದ ಪಶುಗಳೆಲ್ಲಾ ಸತ್ತುಹೋದವು; ಆದರೆ ಇಸ್ರೇಲರಿಗೆ ಸೇರಿದ ಯಾವ ಪಶುವೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:6
10 ತಿಳಿವುಗಳ ಹೋಲಿಕೆ  

ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II


ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II


ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.


ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.


ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.


ಇದಕ್ಕೆ ಕಾಲವನ್ನೂ ಆತ ನಿಗದಿ ಮಾಡಿದ್ದಾರೆ; ನಾಳೆಯೇ ಈ ಕಾರ್ಯವನ್ನು ನಡೆಸುವರು,’ ಎಂದು ಹೇಳು.”


ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ.


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು