ವಿಮೋಚನಕಾಂಡ 9:7 - ಕನ್ನಡ ಸತ್ಯವೇದವು C.L. Bible (BSI)7 ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಫರೋಹನು ವಿಚಾರಿಸಿದಾಗ ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳುಕೊಂಡನು. ಆದಾಗ್ಯೂ ಫರೋಹನ ಹೃದಯವು ಮೊಂಡವಾಗಿದ್ದದರಿಂದ ಆ ಜನರಿಗೆ ಹೊರಡಲಿಕ್ಕೆ ಅಪ್ಪಣೆ ಕೊಡದೆಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿ |