Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:11 - ಕನ್ನಡ ಸತ್ಯವೇದವು C.L. Bible (BSI)

11 ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂವಿುಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ, ಇವುಗಳಿಗೆಲ್ಲಾ ಹಾಳುದೆಶೆ ತಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಹೇಳುವುದೇನೆಂದರೆ, “ನಾನು ಭೂಮಿಗೂ ಪರ್ವತಗಳಿಗೂ ಒಣಗಿಹೋಗಲು ಆಜ್ಞಾಪಿಸಿದ್ದೇನೆ. ಬೆಳೆ, ಹೊಸ ದ್ರಾಕ್ಷಾರಸ, ಆಲೀವ್ ಎಣ್ಣೆ ಮತ್ತು ಭೂಮಿಯು ಫಲಿಸುವ ಯಾವ ವಸ್ತುವಾಗಲಿ ನಾಶವಾಗುವುದು. ಮತ್ತು ಎಲ್ಲಾ ಮನುಷ್ಯರೂ ಬಲಹೀನರಾಗುವರು; ಪ್ರಾಣಿಗಳೂ ಬಲಹೀನವಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:11
13 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.


ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.


ನೀವೂ ನಿಮ್ಮ ಜನಾಂಗವೆಲ್ಲವೂ ನನಗೆ ಮೋಸಮಾಡುವುದರಿಂದ ನೀವೆಲ್ಲರೂ ಶಾಪಗ್ರಸ್ತರು.


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು