Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:15 - ಕನ್ನಡ ಸತ್ಯವೇದವು C.L. Bible (BSI)

15 ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಅರಸನಾದ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಯೆಹೋವನ ಆಲಯದ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಬಂದು ತಮ್ಮ ದೇವರಾದ ಸೇನಾಧೀಶ್ವರ ಯೆಹೋವನ ಆಲಯದ ಕೆಲಸಕ್ಕೆ ಕೈ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ನಾಲ್ಕನೆಯ ದಿವಸದಲ್ಲಿ ಕಟ್ಟುವ ಕಾರ್ಯವನ್ನು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:15
6 ತಿಳಿವುಗಳ ಹೋಲಿಕೆ  

ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಅದೇ ಒಂಬತ್ತನೆಯ ತಿಂಗಲಿನ ಇಪ್ಪತ್ತನಾಲ್ಕನೇ ದಿನದಲ್ಲಿ ಸರ್ವೆಶ್ವರ ಹಗ್ಗಾಯನಿಗೆ ಈ ಎರಡನೆಯ ಸಂದೇಶವನ್ನು ದಯಪಾಲಿಸಿದರು:


ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು.


ಅದೇ ವರ್ಷದ ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಸರ್ವೇಶ್ವರ ಈ ಸಂದೇಶವನ್ನು ದಯಪಾಲಿಸಿದರು:


ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.


ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು