Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ಅದನ್ನು ಸೇವಿಸುವಿರಿ ತೃಪ್ತಿಯಾಗದು, ಕುಡಿಯುತ್ತೀರಿ ಆನಂದವಾಗದು; ಹೊದ್ದುಕೊಳ್ಳುವಿರಿ ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಬಹಳ ಬೀಜವನ್ನು ಭೂಮಿಯಲ್ಲಿ ಬಿತ್ತಿದ್ದರೂ ಸ್ವಲ್ಪವೇ ಪೈರನ್ನು ಕೊಯ್ದಿದ್ದೀರಿ. ನಿಮಗೆ ಊಟಮಾಡಲು ಆಹಾರವಿದ್ದರೂ ತೃಪ್ತಿಯಾಗುವಷ್ಟಿಲ್ಲ. ನಿಮ್ಮಲ್ಲಿ ಕುಡಿಯಲು ಸ್ವಲ್ಪ ಪಾನೀಯವಿದ್ದರೂ ಕುಡಿದು ಅಮಲೇರುವಷ್ಟು ಇಲ್ಲ. ನಿಮ್ಮಲ್ಲಿ ತೊಟ್ಟುಕೊಳ್ಳಲು ಸ್ವಲ್ಪ ಬಟ್ಟೆಯಿದ್ದರೂ ನಿಮ್ಮನ್ನು ಬೆಚ್ಚಗಿಟ್ಟುಕೊಳ್ಳುವಷ್ಟು ಇಲ್ಲ. ನೀವು ಸ್ವಲ್ಪ ಹಣ ಸಂಪಾದನೆ ಮಾಡಿದರೂ ಅದು ಹೇಗೆ ಖರ್ಚಾಗುತ್ತದೋ ನಿಮಗೆ ತಿಳಿಯುವುದಿಲ್ಲ. ನಿಮ್ಮ ಜೇಬಿಗೆ ರಂಧ್ರ ಇದೆಯೋ ಎಂಬಂತೆ ಅದು ಖರ್ಚಾಗುತ್ತದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:6
31 ತಿಳಿವುಗಳ ಹೋಲಿಕೆ  

ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.


ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.


ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.


ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.


ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.


ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”


ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.


ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II


ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.


ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.


ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ನಿಮ್ಮ ಧಾನ್ಯಗಳಿಗೂ ಅವುಗಳಿಂದಾದ ಭೋಜನಗಳಿಗೂ ಅಶುಭ ಉಂಟಾಗುವುದು.


ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು