Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 1:7 - ಕನ್ನಡ ಸತ್ಯವೇದವು C.L. Bible (BSI)

7 ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ; “ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಗತಿ ಏನಾಗಿದೆಯೆಂದು ಮನಸ್ಸಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಮಾಡುತ್ತಿರುವುದನ್ನು ಯೋಚಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 1:7
8 ತಿಳಿವುಗಳ ಹೋಲಿಕೆ  

ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.


ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;


ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು