ಹಗ್ಗಾಯ 2:13 - ಕನ್ನಡ ಸತ್ಯವೇದವು C.L. Bible (BSI)13 ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು. ಅಧ್ಯಾಯವನ್ನು ನೋಡಿ |