ಹಗ್ಗಾಯ 2:14 - ಕನ್ನಡ ಸತ್ಯವೇದವು C.L. Bible (BSI)14 ಆಗ ಹಗ್ಗಾಯನು ಮುಂದುವರಿಸುತ್ತಾ, “ಸರ್ವೇಶ್ವರ ಇಂತೆನ್ನುತ್ತಾರೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಹೊಲೆಯಾಗಿಯೇ ಇದೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಹಗ್ಗಾಯನು ಆ ಪ್ರಸ್ತಾಪವೆತ್ತಿ ಹೀಗಂದನು - ಯೆಹೋವನು ಇಂತೆನ್ನುತ್ತಾನೆ - ಅದರಂತೆ ಈ ಪ್ರಜೆಯು, ಅದರಂತೆ ಈ ಜನಾಂಗವು, ಅದರಂತೆ ಇವರು ಕೈ ಹಾಕುವ ಎಲ್ಲಾ ಕೆಲಸವು, ಅಲ್ಲಿ ತಂದಿಡುವ ನ್ಯೆವೇದ್ಯವು ನನಗೆ ಅಶುದ್ಧವೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಹಗ್ಗಾಯನು, “ನಿಮ್ಮ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ಜನಾಂಗದ ಜನರ ವಿಷಯದಲ್ಲಿಯೂ ಅದು ಸತ್ಯವಾಗಿದೆ. ಅವರು ನನ್ನ ಮುಂದೆ ಪವಿತ್ರರಲ್ಲ. ಆದ್ದರಿಂದ ಅವರು ಯಾವ ವಸ್ತುವನ್ನಾದರೂ ಮುಟ್ಟಿದರೆ ಅದು ಅಶುದ್ಧವಾಗುವುದು ಮತ್ತು ಅವರು ಯಜ್ಞವೇದಿಕೆಯ ಮೇಲೆ ಅರ್ಪಿಸುವುದೆಲ್ಲಾ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ. ಅಧ್ಯಾಯವನ್ನು ನೋಡಿ |