Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಯೆಹೋವನ ಆಲಯದ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನ ಆಲಯನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “‘ಈ ಹೊತ್ತಿಗಿಂತ ಮುಂಚೆ ನಡೆದ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ. ನೀವು ದೇವಾಲಯವನ್ನು ಕಟ್ಟಲು ಆರಂಭಿಸಿದ ಹಿಂದಿನ ದಿವಸಗಳನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:15
14 ತಿಳಿವುಗಳ ಹೋಲಿಕೆ  

ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.


ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,


ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.


ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.


ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.


ಇನ್ನು ಮೇಲಾದರೋ, ಅಳಿದುಳಿದ ಜನರಿಗೆ ಹಾಗೆ ಮಾಡೆನು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು