ಹಗ್ಗಾಯ 2:23 - ಕನ್ನಡ ಸತ್ಯವೇದವು C.L. Bible (BSI)23 ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಶೆಯಲ್ತೀಯೇಲನ ಮಗನೂ, ನನ್ನ ಸೇವಕನಾದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವನ್ನಾಗಿ ಮಾಡಿಕೊಳ್ಳುವೆನು, ಇದಕ್ಕೇ ನಿನ್ನನ್ನು ಆರಿಸಿಕೊಂಡಿದ್ದೇನೆ” ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಶೆಯಲ್ತೀಯೇಲನ ಮಗನೂ ನನ್ನ ಸೇವಕನೂ ಆದ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ಮುದ್ರೆಯುಂಗುರವಾಗಿ ಮಾಡಿಕೊಳ್ಳುವೆನು, ಇದಕ್ಕೆ ನಿನ್ನನ್ನು ಆರಿಸಿಕೊಂಡಿದ್ದೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೇ, ನೀನು ನನ್ನ ಸೇವಕ. ನಿನ್ನನ್ನು ನಾನು ಆರಿಸಿಕೊಂಡಿದ್ದೇನೆ. ಆ ಸಮಯದಲ್ಲಿ ನಾನು ನಿನ್ನನ್ನು ಒಂದು ಮುದ್ರೆಯುಂಗುರವನ್ನಾಗಿ ಮಾಡುವೆನು. ನಾನು ಇವೆಲ್ಲವನ್ನು ಮಾಡಿದೆನೆಂಬುದಕ್ಕೆ ನೀನು ಸಾಕ್ಷಿಯಾಗಿರುವೆ.” ಸರ್ವಶಕ್ತನಾದ ಯೆಹೋವನು ಇವೆಲ್ಲವನ್ನು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |