Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:6 - ಕನ್ನಡ ಸತ್ಯವೇದವು C.L. Bible (BSI)

6 “ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಸ್ವಲ್ಪ ಕಾಲದ ಮೇಲೆ, ನಾನು ಇನ್ನೊಂದೇ ಸಾರಿ ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಒಣನೆಲವನ್ನೂ ಅದುರಿಸಿ ಸಕಲಜನಾಂಗಗಳನ್ನು ನಡುಗಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಸ್ವಲ್ಪ ಕಾಲದ ಮೇಲೆ ನಾನು ಇನ್ನೊಂದೇ ಸಾರಿ ಆಕಾಶವನ್ನೂ ಭೂವಿುಯನ್ನೂ ಸಮುದ್ರವನ್ನೂ ಒಣನೆಲವನ್ನೂ ಅದುರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇನ್ನು ಸ್ವಲ್ಪ ಸಮಯದಲ್ಲಿ ನಾನು ಭೂಪರಲೋಕಗಳನ್ನು ಅದುರಿಸುವೆನು. ಸಮುದ್ರವನ್ನೂ ಒಣನೆಲವನ್ನೂ ಕಂಪಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:6
25 ತಿಳಿವುಗಳ ಹೋಲಿಕೆ  

ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.


ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.


ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.


ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II


ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.


ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ.


ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.


ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು