Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:10 - ಕನ್ನಡ ಸತ್ಯವೇದವು C.L. Bible (BSI)

10 “ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣಿನದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:10
14 ತಿಳಿವುಗಳ ಹೋಲಿಕೆ  

ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:


ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ,


ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು