Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:12 - ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಹಬಕ್ಕೂಕನು ಹೇಳಿದ್ದೇನೆಂದರೆ, ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿರುವೆ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:12
48 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.


“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.


ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!


ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II


“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


“ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.


ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಎಂತಲೆ ನಾನು : “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು