Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:13 - ಕನ್ನಡ ಸತ್ಯವೇದವು C.L. Bible (BSI)

13 ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೆಯ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:13
37 ತಿಳಿವುಗಳ ಹೋಲಿಕೆ  

ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು ! ಮೇದ್ಯವೇ, ಮುತ್ತಿಗೆ ಹಾಕು ! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.


ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II


ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II


ದೇವರಿಗೋ, ತನ್ನ ದೂತರಲ್ಲೂ ನಂಬಿಕೆಯಿಲ್ಲ ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?


ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II


ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II


ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II


ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II


ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.


ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?


ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ?


ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


“ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು