Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:15 - ಕನ್ನಡ ಸತ್ಯವೇದವು C.L. Bible (BSI)

15 ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:15
18 ತಿಳಿವುಗಳ ಹೋಲಿಕೆ  

“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”


“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.


ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ?


ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು