Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:17 - ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲು ತನ್ನ ಬಲೆಗೆ ಸಿಕ್ಕಿದ್ದನ್ನು ಅವನು ನಿತ್ಯವೂ ಈಚೆಗೆ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶಮಾಡುತ್ತಲೇ ಇರುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:17
11 ತಿಳಿವುಗಳ ಹೋಲಿಕೆ  

ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.


ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.


ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.


ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು