ಹಬಕ್ಕೂಕ 1:2 - ಕನ್ನಡ ಸತ್ಯವೇದವು C.L. Bible (BSI)2 ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನೇ, ನಾನು ಎಷ್ಟು ಕಾಲ ನಿನಗೆ ಸಹಾಯಕ್ಕಾಗಿ ಮೊರೆಯಿಡುತ್ತಿರಬೇಕು? ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೇ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವೆ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, ಆದರೂ ನೀವು ರಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿ |