ಹಬಕ್ಕೂಕ 1:3 - ಕನ್ನಡ ಸತ್ಯವೇದವು C.L. Bible (BSI)3 ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೇಡನ್ನೇ ನನ್ನ ಕಣ್ಣಿಗೆ ಏಕೆ ಕಾಣಿಸುವಂತೆ ಮಾಡಿದ್ದಿ? ಕಷ್ಟವನ್ನೇಕೆ ಅನುಭವಿಸುವಂತೆ ಮಾಡಿರುವೆ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ ವ್ಯಾಜ್ಯವೇಳುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ. ಅಧ್ಯಾಯವನ್ನು ನೋಡಿ |