Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:4 - ಕನ್ನಡ ಸತ್ಯವೇದವು C.L. Bible (BSI)

4 ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಧ್ಯವಾಗುತ್ತಿಲ್ಲ; ದುಷ್ಟರು ಶಿಷ್ಟರನ್ನು ಆಕ್ರಮಿಸಿರುವುದರಿಂದ ದೊರೆಯುವ ನ್ಯಾಯವೂ ವಕ್ರವಾಗಿಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:4
46 ತಿಳಿವುಗಳ ಹೋಲಿಕೆ  

ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II


ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;


ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!


ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II


ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II


ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II


ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!


ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.


ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು