Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜನಾಂಗಗಳ ಮಧ್ಯೆ ನಡೆಯುವುದನ್ನು ದೃಷ್ಟಿಸಿ ನೋಡಿ. ಅದರಿಂದ ನೀವು ಬೆರಗಾಗಿ ಹೋಗುವಿರಿ; ನಿಮ್ಮ ಕಾಲದಲ್ಲೇ ನಾನು ಒಂದು ಕಾರ್ಯವನ್ನು ಮಾಡುವೆನು. ನಾನು ಆ ಕಾರ್ಯದ ಬಗ್ಗೆ ನಿಮಗೆ ಎಷ್ಟು ತಿಳಿಹೇಳಿದರೂ ನೀವು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವೆ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವೆ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:5
15 ತಿಳಿವುಗಳ ಹೋಲಿಕೆ  

ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.


ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು