Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 1:9 - ಕನ್ನಡ ಸತ್ಯವೇದವು C.L. Bible (BSI)

9 ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಿಂಸೆ, ಬಾಧೆಯನ್ನು ಗುರಿಯಾಗಿಟ್ಟುಕೊಂಡೆ ಮುನ್ನುಗ್ಗಿ ಬರುವರು. ಜನರನ್ನು ಮರಳಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 1:9
22 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”


ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II


ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’


ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಹೀಗೆ ಕೂಡಿಸಿದ ದವಸಧಾನ್ಯ ಸಮುದ್ರದ ಮರಳಿನಂತೆ ರಾಶಿರಾಶಿಯಾಗಿತ್ತು. ಲೆಕ್ಕಮಾಡುವುದಕ್ಕೂ ಆಗದೆ ಲೆಕ್ಕ ಇಡುವುದನ್ನೇ ಬಿಟ್ಟುಬಿಡಬೇಕಾಯಿತು.


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.


“ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.


ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು