ಹಬಕ್ಕೂಕ 2:10 - ಕನ್ನಡ ಸತ್ಯವೇದವು C.L. Bible (BSI)10 ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ಬಹು ಜನರನ್ನು ನಿರ್ಮೂಲ ಮಾಡಿದ್ದು ನಿನ್ನ ಕುಂಟುಂಬಕ್ಕೆ ಅವಮಾನವನ್ನೇ ತಂದಂತಾಯಿತು, ನಿನಗೇ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಬಹುಜನಾಂಗಗಳನ್ನು ನಿರ್ಮೂಲಮಾಡಿದ್ದು ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು, ನಿನಗೇ ಕೆಡುಕುಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಷ್ಟೋ ಜನರನ್ನು ನಾಶಮಾಡಲು ನೀನು ಯೋಜನೆ ಮಾಡಿರುವೆ. ಆದರೆ ಆ ಯೋಜನೆಗಳು ನಿನ್ನ ಮನೆಗೆ ನಾಚಿಕೆಯನ್ನು ತಂದೊಡ್ಡುವವು. ನೀನು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನೀನು ನಿನ್ನ ಪ್ರಾಣವನ್ನು ಕಳೆದುಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ. ಅಧ್ಯಾಯವನ್ನು ನೋಡಿ |
ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.