Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:14 - ಕನ್ನಡ ಸತ್ಯವೇದವು C.L. Bible (BSI)

14 ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂಮಿಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸಮುದ್ರದಲ್ಲಿ ನೀರು ಹೇಗೋ ಹಾಗೆಯೇ ಭೂವಿುಯಲ್ಲಿ ಯೆಹೋವನ ಮಹಿಮೆಯ ಜ್ಞಾನವು ತುಂಬಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಎಲ್ಲಾ ಕಡೆಗಳಲ್ಲಿರುವ ಜನರು ಯೆಹೋವನ ಮಹಿಮೆಯನ್ನು ತಿಳಿದುಕೊಳ್ಳುವರು. ಹೇಗೆ ನೀರು ಸಮುದ್ರಕ್ಕೆ ಹರಿಯುತ್ತದೋ ಹಾಗೆ ಈ ವರ್ತಮಾನವು ಎಲ್ಲಾ ಕಡೆಗೆ ಹಬ್ಬುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:14
19 ತಿಳಿವುಗಳ ಹೋಲಿಕೆ  

ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.


ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”


ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.


ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.


ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು