ಹಬಕ್ಕೂಕ 2:19 - ಕನ್ನಡ ಸತ್ಯವೇದವು C.L. Bible (BSI)19 ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮರಕ್ಕೆ ಎಚ್ಚತ್ತುಕೋ, ಜಡವಾದ ಕಲ್ಲಿಗೆ ಎದ್ದೇಳು ಎಂದು ಅಪ್ಪಣೆಕೊಡುವವನ ಗತಿಯನ್ನು ಅಯ್ಯೋ, ಏನು ಹೇಳಲಿ! ಇಂಥ ಬೊಂಬೆಯು ಬೋಧಿಸೀತೇ? ಇಗೋ, ಅದಕ್ಕೆ ಬೆಳ್ಳಿಬಂಗಾರವು ಹೊದಗಿಸಿದೆ, ಅದರೊಳಗೆ ಶ್ವಾಸವೇನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆ ಮೂರ್ತಿಗೆ “ಎದ್ದೇಳು” ಎಂದು ಹೇಳುವವನಿಗೆ ಕೇಡಾಗುವುದು! ಮಾತಾಡಲಾಗದ ಒಂದು ಕಲ್ಲಿಗೆ “ಎಚ್ಚರವಾಗು” ಎಂದು ಹೇಳುವವನಿಗೆ ಕೇಡಾಗುವುದು! ಅವುಗಳು ಅವನಿಗೆ ಸಹಾಯ ಮಾಡುವದಿಲ್ಲ. ಮಾಡಲಿಕ್ಕಾಗುವದೂ ಇಲ್ಲ. ಆ ವಿಗ್ರಹಗಳನ್ನು ಬೆಳ್ಳಿಬಂಗಾರದಿಂದ ಹೊದಿಸಿದರೂ ಆ ವಿಗ್ರಹಗಳಲ್ಲಿ ಜೀವವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.” ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.