Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:20 - ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ, ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೋ ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಭೂಲೋಕವೆಲ್ಲಾ ಆತನ ಮುಂದೆ ಮೌನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆಹೋವನಾದರೋ ಹಾಗಲ್ಲ. ಆತನು ತನ್ನ ಪವಿತ್ರ ಆಲಯದಲ್ಲಿದ್ದಾನೆ. ಆದ್ದರಿಂದ ಎಲ್ಲಾ ಭೂನಿವಾಸಿಗಳು ಆತನ ಮುಂದೆ ಮೌನದಿಂದಿದ್ದು ಆತನನ್ನು ಗೌರವಿಸತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:20
17 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.


ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ !


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.


ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು.


ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು