Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:3 - ಕನ್ನಡ ಸತ್ಯವೇದವು C.L. Bible (BSI)

3 ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:3
33 ತಿಳಿವುಗಳ ಹೋಲಿಕೆ  

ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”


ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II


ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.


“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”


ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.


“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು