ಹಬಕ್ಕೂಕ 2:4 - ಕನ್ನಡ ಸತ್ಯವೇದವು C.L. Bible (BSI)4 ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾವ ಜನರು ಅದರ ವಿಚಾರವಾಗಿ ಕೇಳಲು ನಿರಾಕರಿಸುವರೋ ಅವರಿಗಾಗಿ ಈ ಸಂದೇಶವಿರುವದಿಲ್ಲ. ಆದರೆ ಒಬ್ಬ ಸತ್ಪುರುಷನು ಈ ಸಂದೇಶವನ್ನು ನಂಬುವನು. ಆ ಸತ್ಪುರುಷನು ತಾನು ನಂಬಿದ ನಿಮಿತ್ತವಾಗಿ ಬದುಕುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು. ಅಧ್ಯಾಯವನ್ನು ನೋಡಿ |
ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.