ಹಬಕ್ಕೂಕ 2:5 - ಕನ್ನಡ ಸತ್ಯವೇದವು C.L. Bible (BSI)5 ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅಲ್ಲದೆ ದ್ರಾಕ್ಷಾರಸವು ಮೋಸಕರವಾದ ಕಾರಣ ದುಷ್ಟನು ಮದವೇರಿದ್ದಾನೆ, ಸ್ವಸ್ಥಳದಲ್ಲಿ ನಿಲ್ಲನು; ಪಾತಾಳದ ಹಾಗೆ ಅತ್ಯಾಶೆಪಡುತ್ತಾನೆ, ಮೃತ್ಯುವಿನಂತಿದ್ದಾನೆ, ತೃಪ್ತಿಯೇ ಇಲ್ಲ; ಸಕಲ ಜನಗಳನ್ನು ಎಳೆದುಕೊಳ್ಳುತ್ತಾನೆ, ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ಹೇಳಿದ್ದು: “ಒಬ್ಬನನ್ನು ದ್ರಾಕ್ಷಾರಸವು ಮೋಸಪಡಿಸಬಹುದು. ಅದೇ ರೀತಿಯಲ್ಲಿ ಬಲಿಷ್ಠನ ಗರ್ವವು ಅವನನ್ನು ಮೋಸಪಡಿಸಬಹುದು. ಆದರೆ ಅವನಿಗೆ ಸಮಾಧಾನ ಸಿಕ್ಕುವುದಿಲ್ಲ. ಅವನು ಮರಣದಂತಿರುವನು. ಅವನಿಗೆ ಯಾವಾಗಲೂ ಹೆಚ್ಚೆಚ್ಚು ಬೇಕು. ಮರಣದಂತೆ ಅವನಿಗೆ ತೃಪ್ತಿಯೇ ಇರದು. ಅವನು ಜನಾಂಗಗಳನ್ನು ಸೋಲಿಸುತ್ತಲೇ ಇರುವನು. ಆ ಜನರನ್ನು ತನ್ನ ಕೈದಿಗಳನ್ನಾಗಿ ಮಾಡುತ್ತಲೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿ |