Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:6 - ಕನ್ನಡ ಸತ್ಯವೇದವು C.L. Bible (BSI)

6 ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆದರೆ ಹೀಗೆ ಅವನ ದುರಾಶೆಯ ಪಾಶಕ್ಕೆ ಗುರಿಯಾದವರು ಅವನ ಬಗ್ಗೆ ತಿಳಿದು ಗೇಲಿ, ಅಪಹಾಸ್ಯದ ಲಾವಣಿ ಗೀತೆಗಳನ್ನು ರಚಿಸಿ ಹಾಡುವರು. ‘ಅನ್ಯರ ವಸ್ತುಗಳನ್ನು ಅಡವಿಟ್ಟುಕೊಂಡು ಐಶ್ವರ್ಯ ಸಂಪಾದಿಸುವವನ ಗತಿಯನ್ನು ಏನೆಂದು ಹೇಳುವುದು, ಅವನು ಎಷ್ಟು ಕಾಲ ಹೀಗೆ ಮಾಡುವನು!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವುಗಳೆಲ್ಲಾ ಅವನ ಪ್ರಸ್ತಾಪವೆತ್ತಿ ಅವನ ವಿಷಯವಾಗಿ ಈ ಗೇಲಿಯ ಗೀತಗಳನ್ನು ಹಾಡುವವಲ್ಲವೆ - ಅಯ್ಯೋ, ತನ್ನದಲ್ಲದ್ದನ್ನು ಹೆಚ್ಚೆಚ್ಚಾಗಿ ಕೂಡಿಸಿಕೊಂಡು ಅಡವುಗಳನ್ನು ಹೊರೆಹೊರೆಯಾಗಿ ಇಟ್ಟುಕೊಳ್ಳುವವನ ಗತಿಯನ್ನು ಏನು ಹೇಳಲಿ! ಅವನು ಎಷ್ಟು ಕಾಲ ಹೀಗೆ ಮಾಡಾನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:6
25 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.


ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.


“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.


ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.


ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II


ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:


ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.


ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು