ಹಬಕ್ಕೂಕ 2:8 - ಕನ್ನಡ ಸತ್ಯವೇದವು C.L. Bible (BSI)8 ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀನು ಬಹು ಜನರನ್ನು ಕೊಳ್ಳೆಹೊಡೆದು, ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಈ ಕಾರಣದಿಂದ, ಜನಾಂಗಗಳಲ್ಲಿ ಉಳಿದವರೆಲ್ಲರೂ ನಿನ್ನನ್ನು ಕೊಳ್ಳೆ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀನು ಬಹು ಜನಾಂಗಗಳನ್ನು ಕೊಳ್ಳೆಹೊಡೆದು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ ಪುರವನ್ನೂ ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿದ ಕಾರಣ ಜನಾಂಗಗಳಲ್ಲಿ ಉಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಷ್ಟೋ ಜನಾಂಗಗಳಿಂದ ನೀನು ವಸ್ತುಗಳನ್ನು ಅಪಹರಿಸಿರುವೆ. ಅವರು ನಿನ್ನಿಂದ ಇನ್ನೂ ಹೆಚ್ಚಾಗಿ ಅಪಹರಿಸುವರು. ನೀನು ಎಷ್ಟೋ ಮಂದಿಯನ್ನು ಕೊಂದಿರುವೆ; ದೇಶಗಳನ್ನೂ ನಗರಗಳನ್ನೂ ನಾಶಮಾಡಿರುವೆ. ಅಲ್ಲಿಯ ಎಷ್ಟೋ ಜನರನ್ನು ಸಂಹರಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ. ಅಧ್ಯಾಯವನ್ನು ನೋಡಿ |