Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಬಕ್ಕೂಕ 2:9 - ಕನ್ನಡ ಸತ್ಯವೇದವು C.L. Bible (BSI)

9 ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಯ್ಯೋ, ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ಕೇಡಿನೊಳಗಿಂದ ತಪ್ಪಿಸಿಕೊಳ್ಳಬೇಕೆಂದು ತನ್ನ ಕುಲಕ್ಕೆ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಹೌದು, ಕೆಟ್ಟದ್ದನ್ನು ಮಾಡಿ ಧನಿಕನಾದವನಿಗೆ ಬಹಳ ಕೇಡಾಗುವುದು. ಆ ಮನುಷ್ಯನು ಒಂದು ಸುರಕ್ಷಿತವಾದ ಸ್ಥಳದಲ್ಲಿ ವಾಸಿಸಲು ಇದನ್ನೆಲ್ಲಾ ಮಾಡುತ್ತಾನೆ. ಹಾಗೆ ಮಾಡುವದರಿಂದ ಬೇರೆ ಜನರು ಅವನಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲವೆಂದು ಅವನು ತಿಳಿಯುತ್ತಾನೆ. ಆದರೆ ಕೆಟ್ಟ ಸಂಗತಿಗಳು ಅವನಿಗೆ ಸಂಭವಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಬಕ್ಕೂಕ 2:9
26 ತಿಳಿವುಗಳ ಹೋಲಿಕೆ  

ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II


ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ !


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ !


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು